ಅಂಬಿಗರ ಚೌಡಯ್ಯ ಜೀವನ ಚರಿತ್ರೆ | Biography of Ambigar Choudayya in Kannada

ಅಂಬಿಗರ ಚೌಡಯ್ಯ ಜೀವನ ಚರಿತ್ರೆ Biography of Ambigar Choudayya jeevana charitre information in kannada

ಅಂಬಿಗರ ಚೌಡಯ್ಯ ಜೀವನ ಚರಿತ್ರೆ

Biography of Ambigar Choudayya in Kannada
ಅಂಬಿಗರ ಚೌಡಯ್ಯ ಜೀವನ ಚರಿತ್ರೆ | Biography of Ambigar Choudayya in Kannada

ಈ ಲೇಖನಿಯಲ್ಲಿ ಅಂಬಿಗರ ಚೌಡಯ್ಯ ಅವರ ಜೀವನ ಚರಿತ್ರೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ post ನಲ್ಲಿ ನಿಮಗೆ ತಿಳಿಸಲಾಗಿದೆ.

ಅಂಬಿಗರ ಚೌಡಯ್ಯ

ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರು ಒಬ್ಬ 12ನೆ ಶತಮಾನದ ವಚನಕಾರ, ಕವಿ, ಸಾಮಾಜಿಕ ವಿಮರ್ಶಕರು. ಚೌಡಯ್ಯ ಅವರು ಕೋಲಿ ಸಮುದಾಯಕ್ಕೆ ಸೇರಿದವರು. ಇವರು ತಮ್ಮ ವಿಶಿಷ್ಟವಾದ ಒರಟು ವಚನಗಳಿಗೆ ಹೆಸರುವಾಸಿ ಮತ್ತು ಬೇರೆ ವಚನಕಾರರಿಗಿಂತ ಬಿನ್ನರಾದವರು. ಹನ್ನೆರಡನೇ ಶತಮಾನದಲ್ಲಿ ಕಲ್ಯಾಣದ ಶಿವಶರಣರ ಮಧ್ಯದಲ್ಲಿ ಪ್ರಜ್ವಲವಾಗಿ ಬೆಳಗಿದ ಶರಣನೆಂದರೆ ಅಂಬಿಗರ ಚೌಡಯ್ಯ. ಮಾತು ಕಟುವಾದರೂ ದಿಟವನ್ನೆ ನುಡಿದ ದಿಟ್ಟನೀತ ನುಡಿದಂತೆ ನಡೆದವನು, ನಡೆದಂತೆ ನುಡಿದವನು ಅಂಬಿಗರ ಚೌಡಯ್ಯ. ನಿಜಾರ್ಥದಲ್ಲಿ ಒಬ್ಬ ಬಂಡುಕೋರ, ಕ್ರಾಂತಿಕಾರಿ ಶರಣ, ನಿಷ್ಟೂರ ಮನುಷ್ಯ.

ಅಂಬಿಗರ ಚೌಡಯ್ಯರವರ ಜೀವನ

ಅಂಬಿಗರ ಚೌಡಯ್ಯ ಅವರು ಹುಟ್ಟಿದ್ದು 1160 (12ನೇ ಶತಮಾನ) ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಚೌಡದಾನಪುರ ಗ್ರಾಮದಲ್ಲಿ ಕೋಲಿ ಸಮುದಾಯದಲ್ಲಿ ಜನಿಸಿದರು. ಇವರ ತಂದೆ ವಿರೂಪಾಕ್ಷ ಇವರು ಒಬ್ಬ ಅಂಬಿಗರಾಗಿದ್ದವರು. ಚೌಡಯ್ಯ ಅವರು ಆಗಿನ ಕಾಲದಲ್ಲಿ ಹೆಣ್ಣಿನ ಮೇಲೆ ನಡೆಸುತ್ತಿದ್ದ ಶೋಷಣೆಯ ಹಾಗೂ ಉನ್ನತ ಜಾತಿಯರು, ಕೆಳಜಾತಿಯವರ ಮೇಲೆ ನಡೆಸುತ್ತಿದ್ದ ಶೋಷಣೆಯ ವಿರುದ್ಧ ತುಂಬಾ ತಿವ್ರವಾದ ವರಟು ವಚನಗಳಿಂದ ಟೀಕಿಸಿದರು. ಅಂಬಿಗರ ಚೌಡಯ್ಯ ಅವರು ಬಸವಣ್ಣನವರಿಂದ ತುಂಬಾ ಪ್ರಭಾವಿತರಾಗಿದ್ದರು, ಅದಕ್ಕಾಗಿ ಅವರು ಕಲ್ಯಾಣದಲ್ಲಿ ನಡೆಯುತ್ತಿದ್ದ ವೀರಶೈವ ಚಳವಳಿಯನ್ನು ಸೇರಿಕೊಂಡರು ಮತ್ತು ಲಿಂಗಾಯತ ಧರ್ಮವನ್ನು ಅನುಸರಿಸಿದರು.

ವಚನಗಾರರಾಗಿ ಅಂಬಿಗರ ಚೌಡಯ್ಯ

ಈತ ಒಳ್ಳೆಯ ವಚನಕಾರ, ಸುಮಾರು ಈತನ ೨೭೮ ವಚನಗಳು ದೊರಕಿವೆ. ವಚನಾಂಕಿತವನ್ನು ತನ್ನ ಹೆಸರಿನಲ್ಲೆ ಬಳಸಿದ್ದಾನೆ. ಅಂಬಿಗರ ಚೌಡಯ್ಯ ಪರಿಣಾಮ ಬೀರುವಂತೆ ರಚಿಸಿರುವ ಅವನ ವಚನಗಳಲ್ಲಿ ಆಳವಾದ ಅನುಭವ, ಸಾಮಾಜಿಕ ಪ್ರಜ್ಞೆ ಎದ್ದು ಕಾಣುತ್ತದೆ. ಈತನ ಜನ್ಮಸ್ಥಳ ಗುಲ್ಬರ್ಗ ಜಿಲ್ಲೆಯ ಅಫಜಲ್ ಪುರ ತಾಲ್ಲೋಕಿನ ಚೌಡದಾನಪುರವೆಂದು ಸಂಶೋಧಕರು ಹೇಳಿದ್ದಾರೆ.

ಅಂಬಿಗರ ಚೌಡಯ್ಯ ವಿಚಾರವಂತ, ಹಿರಿಯರು ಹೇಳಿದ್ದಾರೆಂದು ಯಾವುದೇ ತತ್ವವನ್ನು ಕುರುಡಾಗಿ ಅನುಸರಿಸುತ್ತಿರಲಿಲ್ಲ, ದಾಕ್ಷಿಣ್ಯ ವಿಲ್ಲದೆ ಚರ್ಚೆ ಮಾಡಿ ಮನಸ್ಸು ಒಪ್ಪಿದರೆ ಮಾತ್ರ ಅಂಗೀಕರಿಸುತ್ತಿದ್ದನು.

ಅಂಬಿಗರ ಚೌಡಯ್ಯ ಏಕದೇವೋಪಾಸಕನು, ಇಷ್ಟಲಿಂಗ ಆರಾಧಕನು, ದೇವಾಲಯ ಗುಡಿಗುಂಡಾರ ವಿರೋಧಿಯಾತ, ಇಷ್ಟಲಿಂಗಪೂಜೆ ಪ್ರತಿಯೊಬ್ಬರು ಮಾಡಬೇಕು. ಇಲ್ಲಿ ಯಾವ ಭೇಧಭಾವ ಇಲ್ಲ. ದೇಹವನ್ನೇ ದೇವಾಲಯವಾಗಿಸಿಕೊಳ್ಳಲು ಅದು ಸಾಧನ ಎಂದನು. ಇಷ್ಟಲಿಂಗವನ್ನು ಪೂಜಿಸದೆ ಬೆಟ್ಟದ ಲಿಂಗ, ಅಂದರೆ ಸ್ಥಾವರಲಿಂಗಕ್ಕೆ ಹೋಗಿ ಬೀಳುವ ಮೂಢರನ್ನು ಕಂಡ ಚೌಡಯ್ಯ ಹೀಗೆ ಹೇಳಿದ್ದಾನೆ.

ಅಂಬಿಗರ ಚೌಡಯ್ಯ ವಚನಗಳು

ಕಟ್ಟಿದ ಲಿಂಗವ ಬಿಟ್ಟು
ಬೆಟ್ಟದ ಲಿಂಗಕ್ಕೆ ಹೋಗಿ
ಅಡಿಮೇಲಾಗಿ ಬೀಳುವ
ಲೊಟ್ಟೆಮೂಳರ ಕಂಡಡೆ
ಗಟ್ಟಿ ಪಾದರಕ್ಸೆಯ ತೆಗೆದುಕೊಂಡು
ಲೊಟಲೊಟನೆ ಹೊಡೆಯೆಂದಾತ
ನಮ್ಮ ಅಂಬಿಗರ ಚೌಡಯ್ಯ.

ಸಮಾಜದಲ್ಲಿದ್ದ ತಾರತಮ್ಯ ನೀತಿಯ ವಿರುದ್ಧ ಹೋರಾಡಿ ಹೊಸ ವ್ಯವಸ್ಥೆಯ ಸೈದ್ಧಾಂತಿಕ ನೆಲೆಗಟ್ಟನ್ನು ಭದ್ರಗೊಳಿಸಿದ ಅಂಬಿಗರ ಚೌಡಯ್ಯ ನಿಜ ಶರಣನು. ಸಮಾಜದ ಅನಾಚಾರ, ಅತ್ಯಾಚಾರ, ಢಂಬಾಚಾರಗಳನ್ನೂ ನಿರ್ಭಿತಿಯಿಂದ ಕಟುವಾಗಿ ಟೀಕಿಸಿದವನು. ತನ್ನ ವಚನಗಳನ್ನು ವೈಚಾರಿಕ ವಾಗಿ ನಿರೂಪಿಸಿ ಮಹಾಮಾನವತಾವಾದಿಯಾಗಿದ್ದಾನೆ.

ಅಂಬಿಗರ ಚೌಡಯ್ಯ ಅವರ ಅಧ್ಯಯನಕ್ಕಾಗಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ “ಅಂಬಿಗರ ಚೌಡಯ್ಯ ಅಧ್ಯಯನ ಪೀಠ”ವನ್ನು ದಿನಾಂಕ ೨೫ನೇ ಜನೆವರಿ ೨೦೧೨ ರಂದು ಕನ್ನಡದ ಹೆಸರಾಂತ ಲೇಖಕರಾದ ಬರಗೂರ ರಾಮಚಂದ್ರಪ್ಪ ಉಧ್ಘಾಟಿಸಿದರು.

ಕಟ್ಟಿದ ಲಿಂಗವ ಕಿರಿದು ಮಾಡಿ,
ಬೆಟ್ಟದ ಲಿಂಗವ ಹಿರಿದು ಮಾಡುವ ಪರಿಯ ನೋಡ!
ಇಂತಪ್ಪ ಲೊಟ್ಟಿಮೂಳರ ಕಂಡರೆ
ಗಟ್ಟಿವುಳ್ಳ ಪಾದರಕ್ಷೆಯ ತೆಗೆದುಕೊಂಡು
ಲೊಟಲೊಟನೆ ಹೊಡೆಯೆಂದಾತ ನಮ್ಮ ಅಂಬಿಗರ ಚೌಡಯ್ಯ.

ಕಂಥೆ ತೊಟ್ಟವ ಗುರುವಲ್ಲ,
ಕಾವಿ ಹೊತ್ತವ ಜಂಗಮವಲ್ಲ,
ಶೀಲ ಕಟ್ಟಿದವ ಶಿವಭಕ್ತನಲ್ಲ,
ನೀರು ತೀರ್ಥವಲ್ಲ,
ಕೂಳು ಪ್ರಸಾದವಲ್ಲ.
ಹೌದೆಂಬವನ ಬಾಯ ಮೇಲೆ
ಅರ್ಧಮಣದ ಪಾದರಕ್ಷೆಯ ತೆಗೆದುಕೊಂಡು
ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ ಟೊಕಟೊಕನೆ ಹೊಡೆ ಎಂದಾತ ನಮ್ಮ ಅಂಬಿಗರ
ಚೌಡಯ್ಯ.

FAQ

ಅಂಬಿಗರ ಚೌಡಯ್ಯ ಎಷ್ಟನೆ ಶತಮಾನದವರು?

೧೨ ನೇ ಶತಮಾನದವರು.

ಅಂಬಿಗರ ಚೌಡಯ್ಯ ಎಲ್ಲಿ ಜನಿಸಿದರು?

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಚೌಡದಾನಪುರ ಗ್ರಾಮದಲ್ಲಿ ಕೋಲಿ ಸಮುದಾಯದಲ್ಲಿ ಜನಿಸಿದರು.

ಇತರೆ ವಿಷಯಗಳು:

ಹಂಪಿ ಬಗ್ಗೆ ಮಾಹಿತಿ ಕನ್ನಡದಲ್ಲಿ

ಇಂಟರ್ನೆಟ್ ಕ್ರಾಂತಿ ಪ್ರಬಂಧ

Leave your vote

12 Points
Upvote Downvote

Leave a Reply

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ