ಚಂದ್ರಶೇಖರ ಕಂಬಾರ ಅವರ ಜೀವನ ಚರಿತ್ರೆ | Biography of Chandrasekhara Kambara in Kannada

ಚಂದ್ರಶೇಖರ ಕಂಬಾರ ಅವರ ಜೀವನ ಚರಿತ್ರೆ Biography of Chandrasekhara Kambara information jeevana charitre in Kannada

ಚಂದ್ರಶೇಖರ ಕಂಬಾರ ಅವರ ಜೀವನ ಚರಿತ್ರೆ

Biography of Chandrasekhara Kambara in Kannada
Biography of Chandrasekhara Kambara in Kannada

ಈ ಲೇಖನಿಯಲ್ಲಿ ಚಂದ್ರಶೇಖರ ಕಂಬಾರ ಅವರ ಜೀವನ ಚರಿತ್ರೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದ್ದೇವೆ.

ಚಂದ್ರಶೇಖರ ಕಂಬಾರ

ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಚಿಕಾಗೊ, ನ್ಯೂಯಾರ್ಕ್, ಬರ್ಲಿನ್, ಮಾಸ್ಕೋ, ಜಪಾನ್ ಮುಂತಾದೆಡೆಗಳ ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಜಾನಪದ ಮತ್ತು ರಂಗಭೂಮಿ ಕುರಿತ ಉಪನ್ಯಾಸಗಳನ್ನು ನೀಡಿರುವ ಹೆಗ್ಗಳಿಕೆ ಇವರದು.

ಚಂದ್ರಶೇಖರ ಕಂಬಾರ ರವರ ಆರಂಭಿಕ ಜೀವನ ಮತ್ತು ಶಿಕ್ಷಣ

ಸಾಹಿತ್ಯ, ಸಿನಿಮಾ, ರಂಗಭೂಮಿ, ಸಂಗೀತ, ಜಾನಪದ, ಅಧ್ಯಾಪನ, ಆಡಳಿತ ಹೀಗೆ ವಿವಿಧಮುಖೀ ವಿದ್ವಾಂಸರಾದ ಚಂದ್ರಶೇಖರ ಕಂಬಾರರು ಜನಿಸಿದ್ದು 1937 ಜನವರಿ 2ರಂದು, ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ. ಅವರ ವಿದ್ಯಾಬ್ಯಾಸ ಗೋಕಾಕ್, ಬೆಳಗಾವಿ ಮತ್ತು ಧಾರವಾಡದಲ್ಲಿ ನಡೆಯಿತು. ಗೋಕಾಕ ಮತ್ತು ಬೆಳಗಾವಿಯ ಬ್ರಿಟಿಷರ ಭಯದ ನೆರಳು ಆವರಿಸಿದ್ದ ಪರಿಸರದಿಂದ ಲೇಖಕನಾಗಿ ಮೈಪಡೆದ ಕಂಬಾರರ ಬಾಲ್ಯದ ಆತಂಕಗಳು ಅವರ ಕೃತಿಗಳಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತವೆ. ಇವರ ಬಾಲ್ಯದ ವಸಾಹತು ಸಂದರ್ಭದ ಅನುಭವಗಳನ್ನು ‘ನನ್ನ ಬದುಕು-ಬರಹ’ ಎಂಬ ಲೇಖನದಲ್ಲಿ ಅವರೇ ಸೂಚಿಸಿದ್ದಾರೆ. ಅಂಥ ವಸಾಹತು ಸಂದರ್ಭದ ಸಂವೇದನೆಯುಳ್ಳ ಕಂಬಾರರು ಉನ್ನತ ಶಿಕ್ಷಣಕ್ಕಾಗಿ ಧಾರವಾಡಕ್ಕೆ ಬಂದು ಎಂ.ಎ ಮತ್ತು ಪಿ.ಎಚ್.ಡಿ ಪದವಿಗಳನ್ನು ಪಡೆದರು.

ವೃತ್ತಿ ಜೀವನ

ಕಂಬಾರರು ಯುವಕರಾಗಿದ್ದಾಗ ಧಾರವಾಡದ ಕವಿ ಸಮ್ಮೇಳನದಲ್ಲಿ ಕವಿತೆಯೊಂದನ್ನು ಓದಿದ್ದರಂತೆ, ಖ್ಯಾತ ಕವಿಗಳೊಬ್ಬರು ಕಂಬಾರರ ಕವಿತೆ ಅಲ್ಲಿ ಓದಿದ ಎಲ್ಲ ಕವಿಗಳಿಗಿಂತ ಭಿನ್ನವಾಗಿದ್ದದ್ದು ಎಲ್ಲರ ಗಮನಕ್ಕೆ ಬಂದಿದ್ದರೂ, ಅದ್ಯಕ್ಷರು ಕಂಬಾರರ ಬಗ್ಗೆ ಕುಹಕದ ಮಾತು ಹೇಳಿದ್ದರು. “ಕಬ್ಬಿಣ ಕಾಸುವವರೂ ಈಗ ಕಾವ್ಯ ಬರೆಯುತ್ತಿದ್ದಾರೆ ” ಎಂಬ ಅಧ್ಯಕ್ಷರ ಮಾತು ಕಂಬಾರರ ಸ್ವಾಭಿಮಾನವನ್ನೇ ಬಡಿದೆಬ್ಬಿಸಿತು.
ಅಂದೇ ಕಂಬಾರ ಕಾವ್ಯವನ್ನು ಪಳಗಿಸಿಕೊಳ್ಳಲು ನಿರ್ಧರಿಸಿದರಂತೆ. ಜಾನಪದ ಸೊಗಡನ್ನು ತಮ್ಮ ಬರವಣಿಗೆಯಲ್ಲಿ ಮೈದಾಳಿಸಿಕೊಂಡು ಬಂದಿರುವ ಚಂದ್ರಶೇಖರ ಕಂಬಾರರು ಹಲವು ಪ್ರತಿಭೆಗಳ ಸಂಗಮ. ಕವಿ, ನಾಟಕಕಾರ, ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಅಧ್ಯಾಪಕ, ಜಾನಪದ ತಜ್ಞ, ೨೦೦೪-೨೦೧೦ರವರೆಗೆ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು

ಇವರು ಪದವಿಯನ್ನು ಮುಗಿಸಿಕೊಂಡ ನಂತರ 1968ರಿಂದ 1969ರವರೆಗೆ ಅಮೆರಿಕಾದ ಚಿಕಾಗೋ ವಿಶ್ವವಿದ್ಯಾಲಯದಲ್ಲಿಯೂ, 1971ರಿಂದ 1991ರವರೆಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿಯೂ ಅಧ್ಯಾಪಕರಾಗಿ, ಪ್ರವಾಚಕರಾಗಿ ಸೇವೆ ಸಲ್ಲಿಸಿದರು. ನಂತರ 1992ರಿಂದ 1998ರವರೆಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಮೊಟ್ಟಮೊದಲ ಕುಲಪತಿಗಳಾಗಿ ಸೇವೆ ಸಲ್ಲಿಸಿದವರಾಗಿದ್ದಾರೆ.

ಸಾಹಿತಿಯಾಗಿ, ಚಂದ್ರಶೇಖರ ಕಂಬಾರವರು

ಸಾಹಿತಿಯಾಗಿ, ಚಂದ್ರಶೇಖರ ಕಂಬಾರವರು ಹಾಗು ಕವಿ-ನಾಟಕಕಾರರಾಗಿ ಕಂಬಾರ ಜನಪ್ರಿಯರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳ ಉಪನ್ಯಾಸಕ ವೃತ್ತಿಯಿಂದ ಕನ್ನಡ ವಿಶ್ವವಿದ್ಯಾಲಯ ಹಂಪಿಯ ಕುಲಪತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಈಗ ಬೆಂಗಳೂರಿನ ಬನಶಂಕರಿಯಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಈ ನಡುವೆ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರಾಗಿಯೂ ಮೂರು ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಮ್ಮ ಊರಿನ ವಾತಾವರಣದಲ್ಲಿನ ಜಾನಪದ ಹಾಡು, ಕುಣಿತ, ನಾಟಕಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವುಗಳ ಸಂಗ್ರಹ, ಬರವಣಿಗೆಯನ್ನು ರೂಢಿಸಿಕೊಂಡರು. ಉತ್ತರ ಕರ್ನಾಟಕದ ಅದರಲ್ಲೂ ಗೋಕಾಕ, ಬೆಳಗಾವಿ, ಧಾರವಾಡದ ಗಂಡು ಭಾಷೆಯನ್ನು ಕನ್ನಡ ಸಾಹಿತ್ಯಕ್ಕೆ ಹೊತ್ತು ತಂದರು. ಧಾರವಾಡದ ವರಕವಿ ಡಾ. ದ.ರಾ.ಬೇಂದ್ರೆ ಅವರ ನಂತರ ಭಾಷೆಯನ್ನು ಪರಿಣಾಮಕಾರಿಯಾಗಿ ದುಡಿಸಿ ಕೊಂಡವರಲ್ಲಿ ಕಂಬಾರರು ಒಬ್ಬರು.
ಕಂಬಾರರು ತಾವೇ ಬರೆದ ಕಾದಂಬರಿಗಳನ್ನು ಚಲನಚಿತ್ರ ಗಳಾಗಿಸಿದರು. “ಕರಿಮಾಯಿ, ಸಂಗೀತಾ, ಕಾಡುಕುದುರೆ ಸಿಂಗಾರವ್ವ ಮತ್ತು ಅರಮನೆ” ಇವುಗಳಲ್ಲಿ ಪ್ರಮುಖವಾದುವು. ಕಂಬಾರರು ತಮ್ಮ ಚಿತ್ರಗಳಿಗೆ ತಾವೇ ಸಂಗೀತ ನೀಡಿದ್ದಾರೆ. ಕಾಡುಕುದುರೆಯ ಹಿನ್ನೆಲೆ ಸಂಗೀತದ ಕಾಡುಕುದುರೆ ಓಡಿಬಂದಿತ್ತ ಹಾಡಿಗೆ ಶಿವಮೊಗ್ಗ ಸುಬ್ಬಣ್ಣ ಅವರಿಗೆ ರಾಷ್ಟ್ರಪತಿಗಳ ಫಲಕ ಕೂಡ ಸಿಕ್ಕಿತು.ಜೀಕೆ ಮಾಸ್ತರ ಪ್ರಣಯ ಪ್ರಸಂಗ’ ಕಾದಂಬರಿಯನ್ನು ಕಿರುತೆರೆಗೂ ಅಳವಡಿಸಿದ್ದಾರೆ. ಹತ್ತಾರು ಸಾಕ್ಷ್ಯ ಚಿತ್ರಗಳನ್ನೂ ನಿರ್ಮಿಸಿರುವ ಕಂಬಾರರು ಉತ್ತಮ ನಾಟಕಕಾರರು. ಜೊತೆಗೆ ಜಾನಪದ ಶೈಲಿಯ ಹಾಡುಗಳಿಂದ ಜನಪ್ರಿಯರು. ಅವರು ತಾವೇ ಸ್ವತಃ ಹಾಡುಗಾರರೂ ಆಗಿದ್ದಾರೆ.

ಕಲಾವಿದರು

ಕನ್ನಡದಲ್ಲಿ ಸಮೃದ್ಧ ಬರಹಗಾರ, ಕಂಬಾರರು ಜಾನಪದ ಮತ್ತು ರಂಗಭೂಮಿಯ ಬಗ್ಗೆ 12 ಸಂಶೋಧನಾ ಗ್ರಂಥಗಳನ್ನು ಬರೆದಿದ್ದಾರೆ ಮತ್ತು ಕನ್ನಡ ಜಾನಪದದ ಬಗ್ಗೆ ನಿಘಂಟನ್ನು ಕೂಡ ರಚಿಸಿದ್ದಾರೆ. ಅವರು ಮೂರು ಕಾದಂಬರಿಗಳು, 21 ನಾಟಕಗಳು ಮತ್ತು ಎಂಟು ಕವನ ಸಂಕಲನಗಳನ್ನು ಸಹ ಬರೆದಿದ್ದಾರೆ. ಅವರ ಐದು ಪುಸ್ತಕಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಪ್ರಶಸ್ತಿ ಲಭಿಸಿದೆ. ಜಾನಪದ ಕಲಾ ಪ್ರಕಾರಗಳಲ್ಲಿ ಆಳವಾದ ಆಸಕ್ತಿ ಹೊಂದಿರುವ ಪ್ರಸಿದ್ಧ ನಾಟಕಕಾರರಾಗಿ, ಅವರು ಪ್ರಪಂಚದಾದ್ಯಂತ ಜಾನಪದ ರಂಗಭೂಮಿಯ ಕುರಿತು ಪ್ರಬಂಧಗಳನ್ನು ಮಂಡಿಸಿದ್ದಾರೆ.

ಕಂಬಾರರು ನಾಟಕಕಾರ ಮತ್ತು ನಾಟಕಕಾರರಾಗಿ ವಿಮರ್ಶಕರು ಮತ್ತು ಅಭಿಮಾನಿಗಳಿಂದ ಮೆಚ್ಚುಗೆ ಗಳಿಸಿದರು. ಅವರ ರಂಗ ನಾಟಕಗಳಾದ ಋಷ್ಯರಿಂಗ, ಚಾಲೇಶ ಮತ್ತು ಜಯ ಸಿದ್ಧನಾಯಕ ವಿವಾದಾತ್ಮಕ ವಿಷಯಗಳನ್ನು ವ್ಯವಹರಿಸಿದ್ದಾರೆ ಮತ್ತು ಕನ್ನಡ ರಂಗಭೂಮಿ ಶ್ರೇಷ್ಠವೆಂದು ಪರಿಗಣಿಸಲಾಗಿದೆ. ಅವರ ಸಿರಿ ಸಂಪಿಗೆ ಕಥೆಯನ್ನು ರಂಗಕ್ಕೆ ಅಳವಡಿಸಿ ಗಿರೀಶ್ ಕಾರ್ನಾಡರು ಯಕ್ಷಗಾನ ಶೈಲಿಯಲ್ಲಿ ‘ನಾಗಮಂಡಲ’ವಾಗಿ ಪ್ರಸ್ತುತ ಪಡಿಸಿದರು. ಅವರ ಮಹಾಕಾವ್ಯವಾದ ಚಕೋರಿಯನ್ನು ಇಂಗ್ಲಿಷ್‌ಗೆ ಅನುವಾದಿಸಲಾಗಿದೆ ಮತ್ತು ಇದು ದೇಶದಾದ್ಯಂತದ ಅಕ್ಷರಶಃ ವಲಯಗಳಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯಿತು.

ಪ್ರಶಸ್ತಿ ಮತ್ತು ಸನ್ಮಾನಗಳು

  • ಅಕಾಡೆಮಿ ರತ್ನ ಪ್ರಶಸ್ತಿ ೨೦೧೧ (ಕೇಂದ್ರ ಸಂಗೀತ ನಾಟಕ ಅಕಾಡೆಮಿ)
  • ಜ್ಞಾನಪೀಠ ಪ್ರಶಸ್ತಿ ೨೦೧೦
  • ದೇವರಾಜ ಅರಸ್ ಪ್ರಶಸ್ತಿ ೨೦೦೭
  • ಜೋಶು ಸಾಹಿತ್ಯ ಪುರಸ್ಕಾರಂ ೨೦೦೫ (ಆಂದ್ರಪ್ರದೇಶ ಸರಕಾರ)
  • ನಾಡೋಜ ಪ್ರಶಸ್ತಿ ೨೦೦೪ (ಹಂಪಿ ಕನ್ನಡ ವಿಶ್ವವಿದ್ಯಾಲಯ)
  • ಪಂಪ ಪ್ರಶಸ್ತಿ ೨೦೦೪
  • ಸಂತ ಕಬೀರ್ ಪ್ರಶಸ್ತಿ ೨೦೦೨
  • ೨೦೦೬ರ ಆಳ್ವಾಸ್ ನುಡಿಸಿರಿ ಸಮ್ಮೇಳನದ ಅಧ್ಯಕ್ಷರು
  • ೨೦೦೪ ರಿಂದ ೨೦೧೦ರ ವರೆಗೆ ವಿಧಾನ ಪರಿಷತ್ ಸದಸ್ಯ
  • ಪದ್ಮಶ್ರೀ ಪ್ರಶಸ್ತಿ ೨೦೦೧
  • ಮಾಸ್ತಿ ಪ್ರಶಸ್ತಿ ೧೯೯೭ (ಕರ್ನಾಟಕ ಸರಕಾರ)
  • ಜಾನಪದ ಮತ್ತು ಯಕ್ಷಗಾನೊ ಅಕಾಡೆಮಿ ಪ್ರಶಸ್ತಿ ೧೯೯೩
  • ಸಿರಿಸಂಪಿಗೆ ನಾಟಕಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ೧೯೯೧

FAQ

ಚಂದ್ರಶೇಖರ ಕಂಬಾರರವರು ಎಷ್ಟರಲ್ಲಿ ಜನಿಸಿದರು ?

1937 ಜನವರಿ 2ರಂದು ಜನಿಸಿದರು.

ಚಂದ್ರಶೇಖರ ಕಂಬಾರರವರು ಎಲ್ಲಿ ಜನಿಸಿದರು ?

1937 ಜನವರಿ 2ರಂದು, ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ ಜನಿಸಿದರು.

ಇತರೆ ವಿಷಯಗಳು:

ಹಂಪಿ ಬಗ್ಗೆ ಮಾಹಿತಿ ಕನ್ನಡದಲ್ಲಿ

ಅಂಬಿಗರ ಚೌಡಯ್ಯ ಜೀವನ ಚರಿತ್ರೆ

Leave your vote

-3 Points
Upvote Downvote

Leave a Reply

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ