ಹೆಲೋ ನಮಸ್ಕಾರ ಸ್ನೇಹಿತರೆ, ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ದೊಡ್ಡ ಸಂತಸದ ಸುದ್ದಿ ಬಂದಿದೆ. ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಯಾದ Bharat Sanchar Nigam Limited (BSNL) 2026ನೇ ಸಾಲಿನ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ 120 Senior Executive Trainee ಹುದ್ದೆಗಳು ಭರ್ತಿ ಮಾಡಲಾಗುತ್ತಿದೆ. ಟೆಲಿಕಾಂ ಹಾಗೂ ಫೈನಾನ್ಸ್ ಕ್ಷೇತ್ರದಲ್ಲಿ ಪದವಿ ಪಡೆದಿರುವ ಯುವಕರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.

ಸ್ಥಿರ ಉದ್ಯೋಗ, ಉತ್ತಮ ವೇತನ ಮತ್ತು ಕೇಂದ್ರ ಸರ್ಕಾರದ ವಿವಿಧ ಸೌಲಭ್ಯಗಳೊಂದಿಗೆ ನಿಮ್ಮ ವೃತ್ತಿಜೀವನವನ್ನು ಹೊಸ ಹಂತಕ್ಕೆ ತೆಗೆದುಕೊಂಡು ಹೋಗಲು ಇದು ಸೂಕ್ತ ಸಮಯ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಮುಖ್ಯ ವಿವರಗಳು:
- ಸಂಸ್ಥೆ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(BSNL)
- ಹುದ್ದೆಯ ಹೆಸರು: ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ
- ಒಟ್ಟು ಹುದ್ದೆಗಳು: 120
- ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಗಳ ಹಂಚಿಕೆ:
- ಹಿರಿಯ ಕಾರ್ಯನಿರ್ವಾಹಕ ತರಬೇತಿದಾರ (ಟೆಲಿಕಾಂ): 95 ಹುದ್ದೆಗಳು
- ಹಿರಿಯ ಕಾರ್ಯನಿರ್ವಾಹಕ ತರಬೇತಿದಾರ (ಹಣಕಾಸು): 25 ಹುದ್ದೆಗಳು
ವಿದ್ಯಾರ್ಹತೆ:
ಬಿಇ / ಬಿ.ಟೆಕ್, CA ಅಥವಾ CMA ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಕನಿಷ್ಠ ವಯಸ್ಸು: 21 ವರ್ಷ
- ಗರಿಷ್ಠ ವಯಸ್ಸು: 30 ವರ್ಷ
ಮಾಸಿಕ ವೇತನ:
- ಆಯ್ಕೆಯಾದ ಅಭ್ಯರ್ಥಿಗಳಿಗೆ ₹24,900 ರಿಂದ ₹50,500 ವರೆಗೆ ಆಕರ್ಷಕ ವೇತನ ನೀಡಲಾಗುತ್ತದೆ. ಇದರ ಜೊತೆಗೆ ವಿವಿಧ ಭತ್ಯೆಗಳು ಹಾಗೂ ಸೌಲಭ್ಯಗಳೂ ಲಭ್ಯವಾಗುತ್ತವೆ.
ಅರ್ಜಿ ಶುಲ್ಕ:
- OC / OBC / EWS ಅಭ್ಯರ್ಥಿಗಳು: ₹2,500
- SC / ST / PWBD ಅಭ್ಯರ್ಥಿಗಳು: ₹1,250
- ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
- ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ
- ಸಂದರ್ಶನ (Interview)
ಅರ್ಜಿ ಸಲ್ಲಿಸುವ ವಿಧಾನ:
- ಮೊದಲು BSNL ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
- Recruitment ವಿಭಾಗದಲ್ಲಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ
- ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯ ಮೂಲಕ ನೋಂದಣಿ ಮಾಡಿ
- ಅಗತ್ಯ ದಾಖಲೆಗಳು (ಫೋಟೋ, ಸಹಿ, ಪ್ರಮಾಣಪತ್ರಗಳು) ಅಪ್‌ಲೋಡ್ ಮಾಡಿ
- ಅರ್ಜಿಯನ್ನು Submit ಮಾಡಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-02-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03 2026
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ದಿನಾಂಕ ವಿಸ್ತೃತ ಅಧಿಸೂಚನೆ | Click Here |
| ಅಧಿಕೃತ ಅಧಿಸೂಚನೆ | Click Here |
| ಅಧಿಕೃತ ವೆಬ್‌ಸೈಟ್ | Click Here |
ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಬಯಸುವವರಿಗೆ Bharat Sanchar Nigam Limited (BSNL) ನೇಮಕಾತಿ ಒಂದು ದೊಡ್ಡ ಅವಕಾಶವಾಗಿದೆ. ಟೆಲಿಕಾಂ ಮತ್ತು ಫೈನಾನ್ಸ್ ಕ್ಷೇತ್ರದಲ್ಲಿ ಅರ್ಹತೆ ಹೊಂದಿರುವವರು ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಮೊದಲುವೇ ನಿಮ್ಮ ಅರ್ಜಿಯನ್ನು ಸಲ್ಲಿಸಿ